ಅಮೆರಿಕಾದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ ನಡೆದಿದ್ದು, ಪೆನ್ಸಿಲ್ವೇನಿಯಾ ಅವೆನ್ಯೂ NW ಬಳಿ ಫೈರಿಂಗ್ ನಡೆದಿದೆ. ಗುಂಡಿನ ದಾಳಿ ನಡೆದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲೇ ಇದ್ದರು ಎನ್ನಲಾಗಿದೆ.
ಶ್ವೇತಭವನದ ಹೊರಗೆ ಶಂಕಿತ 20 ಸುತ್ತು ಗುಂಡು ಹಾರಿಸಿದ್ದು. ಅಮೆರಿಕದ ಭದ್ರತಾ ಪಡೆಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಅಮೆರಿಕದ ಸೀಕ್ರೆಟ್ ಸರ್ವಿಸ್ ನಿನ್ನೆ ಶನಿವಾರ ತಡರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಸಂಜೆ ಸುಮಾರು 6 ಗಂಟೆಯ ನಂತರ ವ್ಯಕ್ತಿಯೋರ್ವ ಭದ್ರತಾ ತಪಾಸಣಾ ಕೇಂದ್ರದತ್ತ ಬಂದು ತನ್ನ ಬ್ಯಾಗಿನಿಂದ ಗನ್ ತೆಗೆದು ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಗುಂಡಿನ ದಾಳಿ ಆರಂಭಿಸಿದ್ದ ಎನ್ನಲಾಗಿದೆ.
ಭದ್ರತಾ ತಪಾಸಣಾ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು, ಪ್ರತಿಯಾಗಿ ಗುಂಡು ಹಾರಿಸಿದ ಅಧಿಕಾರಿಗಳು ಹೊಡೆದುರುಳಿಸಿದ್ದು, ಆತ ಮೃತಪಟ್ಟಿದ್ದಾನೆ ಎಂದು ಯುಎಸ್ ಸೀಕ್ರೆಟ್ ಸರ್ವಿಸ್ ತಿಳಿಸಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಅಧ್ಯಕ್ಷ Donald Trump ಅವರ ಸುತ್ತಮುತ್ತ ನಡೆದ ಮೂರನೇ ಗುಂಡಿನ ದಾಳಿ ಘಟನೆ ಇದಾಗಿದೆ.



