ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧ ಇಲ್ಲ: ಸಚಿವ ಗೃಹ ಸಚಿವ ಪರಮೇಶ್ವರ್

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರಾಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಗೃಹ ಸಚಿವ ಜಿ.ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ.

ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರ್‌ರಚನೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಈ ಎರಡೂ ಪ್ರಕ್ರಿಯೆಗಳು ಪ್ರತ್ಯೇಕವಾಗಿ ನಡೆಯಲಿವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, “ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ಅದು ನಿಯಮಿತ ಪ್ರಕ್ರಿಯೆ. ಸಚಿವ ಸಂಪುಟ ಪುನರಾಚನೆ ನಿರ್ಧಾರಕ್ಕೂ ಅದಕ್ಕೂ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

ಜೂನ್ 18ರಂದು ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅದರ ಮೊದಲು ಸಚಿವ ಸಂಪುಟ ಪುನರಾಚನೆ ಅಥವಾ ನಾಯಕತ್ವ ಬದಲಾವಣೆ ಕುರಿತು ತೀರ್ಮಾನವಾಗುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಈ ಬಗ್ಗೆ ಅನಗತ್ಯ ಊಹಾಪೋಹ ಬೇಡ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ.

Related Articles