ಎಬೋಲಾ ಭೀತಿ: ಡಿಆರ್‌ಸಿ, ಉಗಾಂಡಾ, ದಕ್ಷಿಣ ಸುಡಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಆಫ್ರಿಕಾದ ಪ್ರಮುಖ ದೇಶಗಳಲ್ಲಿ ಮಾರಕ ಎಬೋಲಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಭಾರತೀಯ ನಾಗರಿಕರಿಗೆ ಕಟ್ಟುನಿಟ್ಟಿನ ಪ್ರಯಾಣ ಮಾರ್ಗಸೂಚಿಯನ್ನು ಹೊರಡಿಸಿದೆ.

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC), ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಗೆ ಅತ್ಯಗತ್ಯವಿಲ್ಲದಿದ್ದರೆ “ಅನಗತ್ಯ ಪ್ರಯಾಣ ಮಾಡಬೇಡಿ” ಎಂದು ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯು (WHO) ಈ ದೇಶಗಳಲ್ಲಿನ ಎಬೋಲಾ ಪರಿಸ್ಥಿತಿಯನ್ನು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ ಬೆನ್ನಲ್ಲೇ ಭಾರತ ಸರ್ಕಾರ ಈ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಸದ್ಯ ಆಫ್ರಿಕಾದಲ್ಲಿ ಹರಡುತ್ತಿರುವ ‘ಬುಂಡಿಬುಗ್ಯೋ’ (Bundibugyo) ಹೆಸರಿನ ಎಬೋಲಾ ವೈರಸ್ ತಳಿಗೆ ಯಾವುದೇ ನಿರ್ದಿಷ್ಟ ಲಸಿಕೆ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ.

ಎಬೋಲಾ ಪೀಡಿತ ದೇಶಗಳಿಂದ ಭಾರತಕ್ಕೆ ಬರುವ ಅಥವಾ ಆ ದೇಶಗಳ ಮೂಲಕ ಪ್ರಯಾಣ ಬೆಳೆಸಿ ಬರುವ ಎಲ್ಲಾ ಪ್ರಯಾಣಿಕರಿಗೆ ದೇಶದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮತ್ತು ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

Related Articles