ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ..!

ಉಡುಪಿ: ನಗರದ ಹೃದಯಭಾಗದಲ್ಲಿರುವ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮೂರನೇ ಬಾರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.

ಉಡುಪಿ ಜಿಲ್ಲಾ ನ್ಯಾಯಾಲಯದ ಇಮೇಲ್ ಐಡಿಗೆ ಜೂನ್. 21 ಹಾಗು ಜೂ‌.25 ರ ರಾತ್ರಿ ಇಮೇಲ್ ಮೂಲಕ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿತ್ತು. ಇಂದು ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿರುವುದು ಆತಂಕ ಸೃಷ್ಟಿಸಿದೆ.

Related Articles