ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ

ಉಡುಪಿ : ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಎತ್ತಿನಟ್ಟಿ–ಮದಗದ ಸಮೀಪ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಘಟನೆ ನಡೆದಿದೆ.ಸ್ಥಳೀಯ ನಿವಾಸಿ ಶಮಂತ್ ಅವರು ಶಿರಿಯಾರ ಪೇಟೆಯಿಂದ ತಮ್ಮ ಸ್ಕೂಟಿಯಲ್ಲಿ ಎತ್ತಿನಟ್ಟಿ ಭಾಗದ ಮನೆಗೆ ತೆರಳುತ್ತಿದ್ದ ವೇಳೆ, ಸೈಬ್ರಕಟ್ಟೆ ಕಡೆಯಿಂದ ಬಂದ ಕಾರು ಬಲಭಾಗಕ್ಕೆ ತಿರುಗುವ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಬಳಿಕ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ.ಈ ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಡಿಕ್ಕಿ ಹೊಡೆದ ಬಳಿಕ ಗಾಯಾಳುವಿನ ಸ್ಥಿತಿಯನ್ನು ಪರಿಗಣಿಸದೇ ಪರಾರಿಯಾದ ಕಾರು ಚಾಲಕನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Related Articles