ಎಸ್​ಐಆರ್​ ವೇಳೆ ಹೃದಯಾಘಾತವಾಗಿ ಬಿಎಲ್​ಒ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಎಸ್​ಐಆರ್ ವೇಳೆ ಹಲವು ಎಡವಟ್ಟುಗಳು ನಡೆದಿವೆ. ಮನೆ ಮನೆಗೆ ತೆರಳುವ ಬದಲು ಕಲ್ಯಾಣ ಮಂಟಪ, ಮಸೀದಿ ದೇಗುಲ ಹಾಗೂ ಅಂಗನವಾಡಿಗಳಲ್ಲಿ ಬಿಎಲ್​​ಓಗಳು ಎಸ್​ಐಆರ್ ಫಾರ್​ಮ್ ಹಂಚಿಕೆ ಮಾಡುತ್ತಿದ್ದಾರೆ. ಈ ಮಧ್ಯೆ ಎಸ್​ಐಆರ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕೆಲ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ಇಂತಹದೊಂದು ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಎಸ್​ಐಆರ್​ ವೇಳೆ ಹೃದಯಾಘಾತವಾಗಿ ಬಿಎಲ್​ಒ ಸಾವನ್ನಪ್ಪಿದ್ದಾರೆ.

ನಡೆದಿದ್ದೇನು?
ಕಲ್ಲಾಪುರ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯೂ ಆಗಿದ್ದ ಬಿಎಲ್‌ಒ ಮಂಜುಳಾ (52) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಂಜುಳಾ ಅವರು ಇಂದು ಕಲ್ಲಾಪುರ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಎಸ್‌ಐಆರ್​ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಅವರಿಗೆ ದಿಢೀರನೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ಸದ್ಯ ಮೃತದೇಹವನ್ನು ಭದ್ರಾವತಿ ತಾಲೂಕಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles