ರಾಜ್ಯದಲ್ಲಿ ಮತ್ತೆ ಅಕ್ರಮ ವಲಸಿಗರ ಸದ್ದು ; ಮಂಗಳೂರಲ್ಲಿ 6 ಮಂದಿ ವಶಕ್ಕೆ

ಮಂಗಳೂರು: ಕರ್ನಾಟಕಕ್ಕೆ ಬಾಂಗ್ಲಾದಿಂದ ಅಕ್ರಮ ವಲಸಿಗರ ಆಗಮನ ಮುಂದುವರಿದಿದ್ದು, ಕೂಲಿ ಕಾರ್ಮಿಕರಾಗಿ ಬಂದಿದ್ದ ಆರು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಮುಕ್ಕದ ಖಾಸಗಿ ಆಸ್ಪತ್ರೆಯೊಂದರ ಕಟ್ಟಡದ ಕಾಮಗಾರಿಗೆಂದು ಇವರು ಜಿಲ್ಲೆಗೆ ಆಗಮಿಸಿದ್ದರು ಎನ್ನಲಾಗಿದೆ. ಗುತ್ತಿಗೆದಾರನ ಮೂಲಕ ಆಗಮಿಸಿದ್ದ ಬಾಂಗ್ಲಾದೇಶ ಪ್ರಜೆಗಳು ಕಟ್ಟಡ ಕಾಮಗಾರಿಯಲ್ಲಿ ಭಾಗಿಯಾಗಿರುವ ಮಾಹಿತಿ ಸಿಕ್ಕ ಹಿನ್ನೆಲೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಸದ್ಯ ಈ ಸಂಬಂಧ ವರದಿಯನ್ನು ಎಫ್‌ಆರ್‌ಆರ್‌ಒ (FRRO)ಗೆ ಪೊಲೀಸರು ಕಳುಹಿಸಿದ್ದು, ಬಂಧನ ಕುರಿತು ಆದೇಶ ಹೊರಡಿಸಿ ಭಾರತದಿಂದ ಗಡೀಪಾರು ಮಾಡಲು ಕ್ರಮಕ್ಕಾಗಿ ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ಕಳುಹಿಸಿದ್ದಾರೆ.

Related Articles