ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಚಿವ ಯು.ಟಿ ಖಾದರ್ ಗೆ ಮನವಿ

ಉಡುಪಿ : ಕರ್ನಾಟಕದಾದ್ಯಂತ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಎಚ್‌ಎಂ ಶುಶ್ರೂಷಕಿಯರು, ರಾಜ್ಯ ಸರ್ಕಾರದ ಗುತ್ತಿಗೆ ಆಧಾರಿತ ಶುಶ್ರೂಷಕಿಯರಿಗಿಂತ ಗಣನೀಯವಾಗಿ ಕಡಿಮೆ ವೇತನ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ವೇತನ ಅಸಮಾನತೆಯನ್ನು ನಿವಾರಿಸಿ ತಮ್ಮ ವೇತನವನ್ನು ರಾಜ್ಯ ಸರ್ಕಾರದ ಗುತ್ತಿಗೆ ಆಧಾರಿತ ಶುಶ್ರೂಷಕಿಯರ ಮಟ್ಟಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ, ಉಡುಪಿಗೆ ಭೇಟಿ ನೀಡಿದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಹಾಗೂ ಇತರರು ಉಪಸ್ಥಿತರಿದ್ದರು.

Related Articles