ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ಕೋರ್ಟ್‌ಗೆ 7,005 ಪುಟಗಳ ಬೃಹತ್ ಅಂತಿಮ ವರದಿ ಸಲ್ಲಿಸಿದ SIT

ಮಂಗಳೂರು : ಇಡೀ ರಾಜ್ಯದ ಗಮನ ಸೆಳೆದಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡವು (SIT), ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಅಂತಿಮ ಚಾರ್ಜ್‌ಶೀಟ್ (ವರದಿ) ಸಲ್ಲಿಕೆ ಮಾಡಿದೆ. ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್ ನೇತೃತ್ವದ ತನಿಖಾ ತಂಡವು ಈ ಬೃಹತ್ ವರದಿಯನ್ನು ಕೋರ್ಟ್‌ಗೆ ಒಪ್ಪಿಸಿದೆ. ಬುರುಡೆ ಪ್ರಕರಣದ ಸತ್ಯಾಸತ್ಯತೆ ಹೊರತರಲು ಎಸ್‌ಐಟಿ ಅಧಿಕಾರಿಗಳು ಸುದೀರ್ಘ ತನಿಖೆ ನಡೆಸಿದ್ದು, ದಾಖಲೆಗಳ ಮಹಾಪೂರವನ್ನೇ ನ್ಯಾಯಾಲಯದ ಮುಂದೆ ಇಟ್ಟಿದ್ದಾರೆ. ಎಸ್‌ಐಟಿ ತಂಡವು ಒಟ್ಟು 12 ಫೈಲ್‌ಗಳಲ್ಲಿ ಬರೋಬ್ಬರಿ 7,005 ಪುಟಗಳ ಸುದೀರ್ಘ ವರದಿಯನ್ನು ಸಲ್ಲಿಸಿದೆ. ಈ ಹಿಂದೆ 2025ರ ನವೆಂಬರ್ 20 ರಂದು ಎಸ್‌ಐಟಿ 3,923 ಪುಟಗಳ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು. ಇದೀಗ ಅದಕ್ಕೆ ಪೂರಕವಾಗಿ 3,082 ಪುಟಗಳ ಇಂದಿನ ವರದಿಯನ್ನು ಸೇರಿಸಿ, ಒಟ್ಟು 7,005 ಪುಟಗಳ ಅಂತಿಮ ತನಿಖಾ ವರದಿಯನ್ನು ಸಿದ್ಧಪಡಿಸಲಾಗಿದೆ.

Related Articles