ಮಂಗಳೂರು: ಬಂಟ್ವಾಳದಲ್ಲಿ ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ ಯತ್ನ

ಮಂಗಳೂರು : ಬಂಟ್ವಾಳ ಬಿಸಿ ರೋಡ್‌ನ KSRTC ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಗಾಯಗೊಂಡ ಯುವತಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದ ಕೂಡಲೇ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಘಟನೆಗೆ ಕಾರಣ ಹಾಗೂ ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರಲಿದೆ.

Related Articles