ಮಂಗಳೂರಿನಲ್ಲಿ ತಲ್ವಾರ್ ದಾಳಿ

ಮಂಗಳೂರು : ಮಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ತಲ್ವಾರ್ ದಾಳಿ ನಡೆದಿದೆ. ನಗರದ ಲಾಲ್ ಭಾಗ್ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಯುವಕನ ಮೇಲೆ ತಲ್ವಾರ್ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ಯುವಕನನ್ನು ವಿಕ್ಕಿ ಬಪ್ಪಾಲ್ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ವಿಕ್ಕಿ ಬಪ್ಪಾಲ್ ಬೆನ್ನಿಗೆ ತಲ್ವಾರ್ ದಾಳಿ ನಡೆಸಿ ಬೈಕ್ ನಲ್ಲಿ ಪರಾರಿಯಾಗಿದ್ದಾರೆ.

ಗಂಭೀರ ಗಾಯಗೊಂಡಿದ್ದ ವಿಕ್ಕಿ ಬಪ್ಪಾಲ್ ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Related Articles