ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯ ಮೊದಲ ಸಚಿವರ ಪಟ್ಟಿಯಲ್ಲಿ ಕೈಬಿಡಲಾಗಿದ್ದ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಹೆಸರು ಕೊನೆಯ ಕ್ಷಣದ ಕಸರತ್ತಿನಲ್ಲಿ ಸೇರ್ಪಡೆಯಾಗಿದೆ.

ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆದಿದ್ದ ಮಾಂಕಾಳ್ ವೈದ್ಯ ಅವರನ್ನು ಕೈಬಿಟ್ಟು ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಸೇರಿಸಿರುವ ಬಗ್ಗೆ ಪಕ್ಷದ ಮೂಲಗಳು ಖಚಿತ ಪಡಿಸಿದೆ.



