ಉಡುಪಿ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಹೆರಂಜೆಯ ಸ್ಪೋರ್ಟ್ಸ್ ಕ್ಲಬ್ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿತ್ತು .

ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳಿಗೆ ಕಾರ್ಯಕ್ರಮದಲ್ಲಿ ಆರ್ಥಿಕ ನೆರವು ನೀಡಿ ಸನ್ಮಾನಿಸಲಾಯಿತು. ದೇಶವನ್ನು ಪ್ರತಿನಿಧಿಸಿ ಸಾಧನೆ ಮಾಡಿದ ಮಾಜಿ ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾದ ಶಾಲಿನಿ ಆರ್. ಶೆಟ್ಟಿ ಹಾಗೂ ಎಸ್.ಎಂ. ಜಹೀರ್ ಅಬ್ಬಾಸ್ ಅವರನ್ನು ಗೌರವಿಸಲಾಯಿತು.

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಬಿಜು ಜಿ. ನಾಯರ್, ಗೌರವಾಧ್ಯಕ್ಷ ಎಂ. ಚಂದ್ರಶೇಖರ್ ಹೆಗ್ಡೆ, ಕಾರ್ಯದರ್ಶಿ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ, ಖಜಾಂಚಿ ವಿಕ್ರಮ್ ಪ್ರಭು, ಗೌರವ ಕಾರ್ಯದರ್ಶಿ ಗ್ರೆಗರಿ ಡಿ’ಸಿಲ್ವ, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.



