ಮಂಗಳೂರಿನಲ್ಲಿ ಸೆ.18ರಂದು ರಾಜ್ಯದ ಸಚಿವ ಸಂಪುಟ ಸಭೆ

ಮಂಗಳೂರು: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ವ್ಯವಸ್ಥೆ ರೂಪಿಸುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಸ್ತೂರಿ ರಂಗನ್ ವರದಿ, ಪ್ರವಾಸೋದ್ಯಮ, ಮೂಲಸೌಕರ್ಯ, ಕಾನೂನು ಸುವ್ಯವಸ್ಥೆ, ವಿಮಾನ ನಿಲ್ದಾಣ ವಿಸ್ತರಣೆ, ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ಸೇರಿದಂತೆ ಹಲವು ವಿಷಯಗಳು ಸಭೆಯಲ್ಲಿ ಚರ್ಚೆಗೆ ಬರಲಿವೆ. ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಎರಡನೇ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಇತ್ತೀಚೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಮನವಿ ಮಾಡಿದ್ದರು.

Related Articles