ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್–2026 ಉದ್ಘಾಟನೆ

ಉಡುಪಿ : ತೆಂಕನಿಡಿಯೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಲಾದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್–2026 ಅನ್ನು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಸುಮಾರು ಮೂವತ್ತು ವರ್ಷಗಳಿಂದ ಉಡುಪಿಯಲ್ಲಿ ತನ್ನದೇ ಆದ ಪ್ರಸಿದ್ಧಿಯನ್ನು ಪಡೆದಿರುವ ಈ ಕಾಲೇಜು, ಇದೀಗ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಆಯೋಜಿಸುವ ಮೂಲಕ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದೆ ಎಂದು ಅವರು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ಗಾವಂಕರ್, ಆಡಳಿತ ಮಂಡಳಿ ಸದಸ್ಯರಾದ ಪ್ರಖ್ಯಾತ್ ಶೆಟ್ಟಿ, ದೈಹಿಕ ಶಿಕ್ಷಣಾಧಿಕಾರಿ ರೋಷನ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles