ಉಡುಪಿ: ಜೇಸಿಐ ಕುಂದಾಪುರ ಸಿಟಿ ವತಿಯಿಂದ ಆಯೋಜಿಸಿರುವ ಜೇಸಿಐ ಸಪ್ತಾಹ–2026ರ ಉದ್ಘಾಟನೆ ಹಾಗೂ ಮಾನಸಿಕ ಆರೋಗ್ಯ ನಿರ್ವಹಣಾ ವಿಚಾರ ಸಂಕಿರಣವು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನಡೆಯಿತು. ಕುಂದಾಪುರ ಪೊಲೀಸ್ ನಿರೀಕ್ಷಕ ಜಯರಾಮ್ ಡಿ. ಗೌಡ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಜೇಸಿಐಯ ಸ್ಥಾಪಕ ಉಪ ಜಿಲ್ಲಾ ಗವರ್ನರ್ ಲಯನ್ ಹರಿಪ್ರಸಾದ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಮಾನಸಿಕ ಆರೋಗ್ಯ, ಒತ್ತಡ ನಿರ್ವಹಣೆ ಹಾಗೂ ದೈನಂದಿನ ಬದುಕಿನಲ್ಲಿ ಆರೋಗ್ಯಕರ ಮನಸ್ಥಿತಿಯನ್ನು ಕಾಪಾಡಿಕೊಳ್ಳುವ ಕುರಿತು ವಿಚಾರ ಸಂಕಿರಣದಲ್ಲಿ ಮಾಹಿತಿ ನೀಡಲಾಯಿತು.ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪೂರ್ವ ಸೇವೆಯನ್ನು ಗುರುತಿಸಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲ ಡಾ. ಉಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಆರ್. ಅವರು ಮಾನಸಿಕ ಆರೋಗ್ಯ ನಿರ್ವಹಣೆ ಕುರಿತು ತರಬೇತಿ ನೀಡಿದರು.



