ಮಂಗಳೂರು : ಸೌಜನ್ಯ ಪ್ರಕರಣ ಮರುತನಿಖೆಗೆ ರಚನೆಯಾಗಿರುವ ಎಸ್‌ಐಟಿ ತಂಡದ ಅಧಿಕಾರಿಗಳು ಗುರುವಾರ ಮಂಗಳೂರಿಗೆ ಆಗಮಿಸಿದರು.ಎಸ್‌ಐಟಿ ಸದಸ್ಯರಾದ ಗುಪ್ತಚರ ವಿಭಾಗದ ಎಸ್‌ಪಿ ನಿಶಾ ಜೇಮ್ಸ್ ಹಾಗೂ ಸಿಐಡಿ ಎಸ್‌ಪಿ ಲೋಕೇಶ್ ಜಗಾರ್ ಆಗಮಿಸಿದ್ದಾರೆ. ಮಂಗಳೂರಿನಲ್ಲಿ ಕಚೇರಿ ರಚಿಸುವ ಬಗ್ಗೆ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ನಗರ ಪೊಲೀಸ್ ಆಯುಕ್ತ, ಎಸ್ ಐಟಿ ಸದಸ್ಯ ಸುಧೀರ್ ಕುಮಾರ್ ರೆಡ್ಡಿ ಜತೆ ಚರ್ಚೆ ನಡೆಸಿದ್ದಾರೆ.



