ಉಡುಪಿ-ಉಚ್ಚಿಲ ದಸರಾಕ್ಕೆ ಸಿಎಂ ಆಗಮನ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಉಡುಪಿ: ಕಾಪು ತಾಲ್ಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವತಿಯಿಂದ ಆಯೋಜಿಸಿರುವ ಅಭಿನಂದನಾ ಸಮಾರಂಭ ಮತ್ತು ಮಹಿಳಾ ದಸರಾ ಉದ್ಘಾಟನಾ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪರಿಶೀಲಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ವೇದಿಕೆ, ಕಾರ್ಯಕ್ರಮದ ವ್ಯವಸ್ಥೆಗಳು ಹಾಗೂ ಇತರ ಅಗತ್ಯ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಮಾಹಿತಿ ಪಡೆದು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು

Related Articles